THIRTHAHALLI | ತಾಲೂಕಿನಾದ್ಯಂತ ಭಾರಿ ಮಳೆ (Heavy Rain)ಯಾಗುತ್ತಿದ್ದು ಹೊನ್ನೆತಾಳು ಗ್ರಾಮದ ಯಕ್ಷಗಾನ ಕಲಾವಿದ ನಂದನ್ ಶೆಟ್ಟಿ ಎಂಬುವವರ ಮನೆ ತಡರಾತ್ರಿ ಕುಸಿದು ಬಿದ್ದಿದೆ.
ಪ್ರಸ್ತುತ ಮಂದಾರ್ತಿ ಮೇಳದಲ್ಲಿ ಕಲಾವಿದನಾಗಿ ಸೇವೆ ಸಲ್ಲಿಸುತ್ತಿರುವ ನಂದನ್, ಮಳೆಗಾಲದ ಸೇವೆಯಾಟದಲ್ಲಿ ಸೇವೆ ಸಲ್ಲಿಸುತ್ತಿದ್ದು ಇವರು ನಿನ್ನೆ ಮಂದಾರ್ತಿಯಲ್ಲಿದ್ದರು, ಅವರ ತಾಯಿ ಭಾರತಿ ಒಬ್ಬರೇ ಮನೆಯಲ್ಲಿ ವಾಸವಾಗಿದ್ದರು ಈ ಸಂದರ್ಭದಲ್ಲಿ ರಾತ್ರಿ ಭಾರಿ ಮಳೆಗೆ ಮನೆ ಕುಸಿದಿದೆ. ಭಾರಿ ಶಬ್ದ ಕೇಳಿ ಮನೆಯಿಂದ ಆಚೆ ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.
ಕಡು ಬಡ ಕುಟುಂಬದವರಾಗಿದ್ದು ಇರಲು ಬೇರೆ ಮನೆ ಇಲ್ಲದೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮನೆಯನ್ನು ವೀಕ್ಷಿಸಿ ತಕ್ಷಣ ಸರಿಪಡಿಸಿ ಕೊಡಬೇಕಾಗಿದೆ ಎಂದು ಸ್ಥಳೀಯರು ವಿನಂತಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ತಕ್ಷಣ ಧಾವಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುನಾಥ್ ಹಾಗೂ ಸ್ಥಳೀಯ ಯುವಕರು ಇವರಿಗೆ ಸಹಕಾರ ನೀಡಿದ್ದಾರೆ.
Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.