Hosanagara

HOSANAGARA | ನಗರ ಹೋಬಳಿಯಾದ್ಯಂತ ರಣಭೀಕರ ವರ್ಷಧಾರೆ ! ಒಂದೇ ದಿನ 316 ಮಿ.ಮೀ. ಮಳೆ ದಾಖಲು, ಲಿಂಗನಮಕ್ಕಿ ಜಲಾಶಯ ಭರ್ತಿಗೆ 8.5 ಅಡಿ ನೀರು ಬಾಕಿ

HOSANAGARA | ತಾಲೂಕಿನ ಬಿದನೂರುನಗರ ಹೋಬಳಿಯಾದ್ಯಂತ ವರುಣಾರ್ಭಟ ಜೋರಾಗಿದ್ದು ರಾತ್ರಿಯಿಡಿ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಬಿದನೂರುನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ 316 ಮಿ.ಮೀ. ಮಳೆ ದಾಖಲಾಗಿದೆ.

ಮತ್ತೆಲ್ಲೆಲ್ಲಿ ಎಷ್ಟಾಗಿದೆ ಮಳೆ ?

  • ಮಾಸ್ತಿಕಟ್ಟೆ : 240 mm
  • ಚಕ್ರಾನಗರ : 220 mm
  • ಯಡೂರು : 217 mm
  • ಹುಲಿಕಲ್ : 210 mm
  • ಮಾಣಿ : 185 mm
  • ಸಾವೇಹಕ್ಲು : 167 mm
  • ಕಾರ್ಗಲ್ (ಸಾಗರ) : 67.4 mm
  • ಹೊಸನಗರ : 39 mm

ಲಿಂಗನಮಕ್ಕಿ ಜಲಾಶಯ :

1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಇಂದು ಬೆಳಗ್ಗೆ 8:00 ಗಂಟೆಗೆ 1810.50 ಅಡಿ ತಲುಪಿದ್ದು ಜಲಾಶಯಕ್ಕೆ 50710 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಗೆ ಜಲಾಶಯದ ನೀರಿನ ಮಟ್ಟ 1786.30 ಅಡಿ ದಾಖಲಾಗಿತ್ತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>