Karnataka Rain | ರಾಜ್ಯದ ಹಲವೆಡೆ ಕಳೆದ ಎರಡ್ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ (Rains) ಆರ್ಭಟಿಸಿದ್ದಾನೆ.
ಇಂದು ಕೂಡ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮುಂದಿನ ಎರಡು ದಿನಗಳಲ್ಲೂ ಮಳೆಯಾಗಲಿದೆ ಎಂದು ವರದಿಯಾಗಿದೆ.
ಕರಾವಳಿ ಬಹುತೇಕ ಸ್ಥಳಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಬುಧವಾರ ಮಧ್ಯಾಹ್ನ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಜೋರು ಮಳೆಯಾದ ವರದಿಯಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಸಾಧಾರಣ ಅಥವಾ ಲಘು ಮಳೆಯಾಗುವ ನಿರೀಕ್ಷೆ ಇದೆ.
ನ. 16 ರಂದು ಎಲ್ಲೆಲ್ಲೆ ಮಳೆಯಾಗಲಿದೆ ?
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಕೊಡಗು ಸೇರಿದಂತೆ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ನ. 17 ರಂದು ಎಲ್ಲೆಲ್ಲೆ ಮಳೆಯಾಗಲಿದೆ ?
ಉಡುಪಿ, ದಕ್ಷಿಣ ಕನ್ನಡದ ಕೆಲವು ಸ್ಥಳಗಳು, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನ. 18 ರಂದು ಎಲ್ಲೆಲ್ಲೆ ಮಳೆಯಾಗಲಿದೆ ?
ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.