ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಶೃಂಗೇರಿ ಬಳಿಯ ನೆಮ್ಮಾರ್ ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಗುಡ್ಡದ ಮಣ್ಣು ಕುಸಿದಿದೆ.
ಕಳಸ, ಕುದುರೆಮುಖ, ಕೊಪ್ಪ, ಶೃಂಗೇರಿ, ಬಾಳೆಹೊನ್ನೂರು, ಕೊಟ್ಟಿಗೆಹಾರ, ಆಲ್ದೂರು, ಎನ್.ಆರ್.ಪುರ, ಆಲ್ದೂರು, ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರದಲ್ಲೂ ಬೆಳಿಗ್ಗೆಯಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆ.
ಶೃಂಗೇರಿಯ ಸಮೀಪದ ಸುಂಕದಮಕ್ಕಿ– ನೆಮ್ಮಾರ್ ಸಮೀಪ ವಿಪರೀತ ಮಳೆಗೆ ಹೆದ್ದಾರಿ ಮೇಲೆ ಗುಡ್ಡದ ಮಣ್ಣು ಬಿದ್ದಿದೆ. ಇದರಿಂದ ಎಸ್.ಕೆ, ಬಾರ್ಡರ್ ಮತ್ತು ಕಾರ್ಕಳಕ್ಕೆ ಸಂಪರ್ಕ ಕಡಿತಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಸ್ತೆಗೆ ಬಿದ್ದಿರುವ ಮಣ್ಣು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.