ಬೆಂಗಳೂರು ; ರಾಜ್ಯದಲ್ಲಿ ನಾಳೆ (ಮೇ 17) ಯಿಂದ ಮಳೆ (Rain) ಚುರುಕಾಗಲಿದೆ. ಅದರಲ್ಲಿಯೂ ರಾಜ್ಯಧಾನಿ ಬೆಂಗಳೂರಿನಲ್ಲಿ ಮೇ 17ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 23 ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಹಾಸನ, ಕೊಡಗು, ತುಮಕೂರು, ದಾವಣಗೆರೆ, ವಿಜಯಪುರ, ಧಾರವಾಡ, ಯಾದಗಿರಿ, ಕಲಬುರಗಿ, ಬೀದರ್, ಗದಗ, ಹಾವೇರಿ, ರಾಯಚೂರು, ಯಾದಗಿರಿ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಲೇಖನವನ್ನು ಮುಂದುವರಿಸಿ ಓದಿ
ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

