ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಹಲವೆಡೆ ವರ್ಷಧಾರೆ: ಹೊಸನಗರದ ಕೆರೆಹಳ್ಳಿಯಲ್ಲಿ ಭಾರಿ ಮಳೆ ದಾಖಲು

Heavy rainfall has been observed in parts of Hosanagara and Soraba taluks.

Shivamogga Rain

ಶಿವಮೊಗ್ಗ: ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಲ್ಲಿ ಹಲವೆಡೆ ಉತ್ತಮ ಮಳೆಯಾಗಿದ್ದು, ವಿಶೇಷವಾಗಿ ಹೊಸನಗರ ಮತ್ತು ಸೊರಬ ತಾಲ್ಲೂಕಿನ ಭಾಗಗಳಲ್ಲಿ ಮಳೆಯ ಅಬ್ಬರ ಕಂಡುಬಂದಿದೆ.

WhatsApp Group Join Now
Telegram Group Join Now
Instagram Group Join Now

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬಿಡುಗಡೆ ಮಾಡಿರುವ ಇಂದು ಬೆಳಿಗ್ಗೆ 7:30 ರವರೆಗಿನ ವರದಿಯ ಪ್ರಕಾರ, ಹೊಸನಗರ ತಾಲ್ಲೂಕಿನ ಕೆರೆಹಳ್ಳಿ (ರಿಪ್ಪನ್‌ಪೇಟೆ) ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು ಅಂದರೆ 30.75 ಮಿ.ಮೀ. ಮಳೆ ದಾಖಲಾಗಿದೆ. ಉಳಿದಂತೆ ಹೊಸನಗರದ ಅರಸಾಳು ಮತ್ತು ಜೇನಿ ಹಾಗೂ ಸೊರಬ ತಾಲ್ಲೂಕಿನ ಇಂಡುವಳ್ಳಿ ಭಾಗದಲ್ಲೂ ಉತ್ತಮ ಮಳೆಯಾಗಿದೆ.

ಜಿಲ್ಲೆಯಲ್ಲಿ ದಾಖಲಾದ ಪ್ರಮುಖ ಮಳೆ ವಿವರ :

  • ಕೆರೆಹಳ್ಳಿ (ಹೊಸನಗರ): 30.75 ಮಿ.ಮೀ.
  • ಅರಸಾಳು (ಹೊಸನಗರ): 27.0 ಮಿ.ಮೀ.
  • ಇಂಡುವಳ್ಳಿ (ಸೊರಬ): 23.0 ಮಿ.ಮೀ.
  • ಜೇನಿ (ಹೊಸನಗರ): 20.5 ಮಿ.ಮೀ.

ಮಲೆನಾಡು ಭಾಗದಲ್ಲಿ ಸುರಿದ ಈ ಮಳೆಯಿಂದಾಗಿ ವಾತಾವರಣ ತಂಪಾಗಿದ್ದು, ಕೃಷಿ ಚಟುವಟಿಕೆಗಳಿಗೆ ಪೂರಕವಾಗಿದೆ. ಇನ್ನೂ ಅ.22 ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!