Chikkamagaluru

ಭಾರಿ ಮಳೆ ; ಈ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ !

ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ತಾಲೂಕಿನ ಶಾಲೆ ಕಾಲೇಜ್‌ಗಳಿಗೆ ನಾಳೆ (ಜು.07) ರಜೆ ಘೋಷಣೆ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now

ಹೊಸನಗರ :

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಾದ್ಯಂತ ಅತಿಯಾದ ಮಳೆ ಮುಂದುವರೆದಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಂಗಳವಾರ ಸಹ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪಿ.ಯು. ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಸೀಲ್ದಾರ್ ಭರತ್‌ರಾಜ್ ಆದೇಶಿಸಿದ್ದಾರೆ. ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ಸಾರ್ವತ್ರಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಸೂಚಿಸಿದ್ದಾರೆ.

ಸಾಗರ :

ಇನ್ನೂ ಸಾಗರ ತಾಲೂಕಿನಲ್ಲೂ ಗಾಳಿ, ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಜುಲೈ 7ರ ಮಂಗಳವಾರ ರಜೆ ಘೋಷಿಸಿ ತಹಸೀಲ್ದಾ‌ರ್ ಡಾ.ಪ್ರತಿಭಾ ಆದೇಶಿಸಿದ್ದಾರೆ. ಆದರೆ ಪಿಯು, ಪದವಿ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳಸ :

ಮುಂದುವರೆದ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ನಾಳೆ (ಜು.07 ಮಂಗಳವಾರ) ರಜೆ ನೀಡಿ ತಹಸೀಲ್ದಾರ್ ಮಂಜುನಾಥ್ ಆದೇಶಿಸಿದ್ದಾರೆ.

ತೀರ್ಥಹಳ್ಳಿ :

ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ಜು.07 ರಂದು ರಜೆ ಘೋಷಿಸಿ ತಹಸೀಲ್ದಾ‌ರ್ ರಂಜಿತ್‌ ಆದೇಶಿಸಿದ್ದಾರೆ.

ತಾಲ್ಲೂಕಿನಾದ್ಯಂತ ವ್ಯಾಪಾಕವಾಗಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಹಾಗೂ ಶೀತ ಗಾಳಿ ಬೀಸುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮಂಗಳವಾರ ತೀರ್ಥಹಳ್ಳಿ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!