ಶಿವಮೊಗ್ಗ

ಮಳೆಗಾಲ ಮುಗಿಯುವವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ !

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ವಾಹನಗಳು) 15 ಜೂನ್ 2026 ರಿಂದ ಮಳೆಗಾಲ ಮುಗಿಯುವವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಹುಲಿಕಲ್ ಘಾಟಿಯಲ್ಲಿ ಭೂಕುಸಿತ ಸಂಭವಿಸಿ ತಾತ್ಕಾಲಿಕ ರಕ್ಷಣಾ ಕಾರ್ಯಗಳು ಪೂರ್ಣಗೊಳ್ಳದಿರುವ ಕಾರಣ, ಆಗುಂಬೆ ಘಾಟಿಯ ರಾಷ್ಟ್ರೀಯ ಹೆದ್ದಾರಿ 169ಎ (ತೀರ್ಥಹಳ್ಳಿ-ಮಲ್ಪೆ-ಉಡುಪಿ) ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಈ ವಾಹನಗಳ ಸಂಚಾರ ಮುಂದುವರಿದರೆ ರಸ್ತೆಯ ಬದಿಯ ಭೂಕುಸಿತ ಸಂಭವಿಸುವ ಸಾಧ್ಯತೆ ಇದ್ದು, ಅಪಘಾತಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಬಹುದು.

ಇದರ ಜೊತೆಗೆ, ಮಣಿಪಾಲ್, ಉಡುಪಿ, ಮಂಗಳೂರು ಹಾಗೂ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ನಾಗರಿಕರಿಗೆ ಇರುವ ಸಂಪರ್ಕ ಬಂದ್ ಆದರೆ ನಾಲ್ಕು ಜಿಲ್ಲೆಯ ನಾಗರೀಕರಿಗೆ ತುಂಬಾ ತೊಂದರೆಯಾಗುವ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಪರ್ಯಾಯ ಮಾರ್ಗಗಳು :

ತೀರ್ಥಹಳ್ಳಿ-ಉಡುಪಿ ಕಡೆ ಹೋಗುವ ವಾಹನಗಳು : ತೀರ್ಥಹಳ್ಳಿ-ನಗರ-ನಾಗೋಡಿ-ಕೊಲ್ಲೂರು-ಕುಂದಾಪುರ-ಉಡುಪಿ ಹಾಗೂ ತೀರ್ಥಹಳ್ಳಿ-ಶೃಂಗೇರಿ-ಕೆರೆಕಟ್ಟೆ-ಬಜಗೋಳಿ-ಕಾರ್ಕಳ-ಉಡುಪಿ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಉಡುಪಿ-ತೀರ್ಥಹಳ್ಳಿ ಕಡೆಗೆ ಪ್ರಯಾಣಿಸುವ ವಾಹನಗಳು : ಉಡುಪಿ-ಕುಂದಾಪುರ-ಕೊಲ್ಲೂರು-ನಾಗೋಡಿ-ನಗರ-ತೀರ್ಥಹಳ್ಳಿ ಮತ್ತು ಕಾರ್ಕಳ-ಬಜಗೋಳಿ-ಕೆರೆಕಟ್ಟೆ-ಶೃಂಗೇರಿ-ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!