Agumbe ಸೆ.15ರ ವರೆಗೆ ಆಗುಂಬೆ ಘಾಟ್‌ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ ! ಪರ್ಯಾಯ ಮಾರ್ಗ ಯಾವುದು ?

Written by malnadtimes.com

Published on:

SHIVAMOGGA | ಮಳೆ ಹಿನ್ನೆಲೆ Agumbe ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ.

Read More :ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಭಾರಿ ವರ್ಷಧಾರೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

ಪರ್ಯಾಯ ಮಾರ್ಗ ಯಾವುದು ?

ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ – ಮಾಸ್ತಿಕಟ್ಟೆ – ಸಿದ್ದಾಪುರ – ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More : Ganga kalyana ರೈತರಿಗೆ ಶುಭ ಸುದ್ದಿ ,ಗಂಗಾ ಕಲ್ಯಾಣ ಯೋಜನೆ 2024 ಅರ್ಜಿ ಅಹ್ವಾನ!

Leave a Comment