RIPPONPETE ; ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್‌ನ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗ್ರಾಮೀಣ ಪ್ರದೇಶದ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್‌ನ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು ಕ್ರೀಡಾಪಟುಗಳಾದ ಹೇಮಂತ್, ಹರ್ಷಿತ್, ನಮನ್, ಮನೋಜ್, ವಿಶ್ವ ಈ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಾಲೆಯ ಅಡಳಿತ ಮಂಡಳಿ ಮತ್ತು ಪೋಷಕವರ್ಗ ಶಿಕ್ಷಕ ವೃಂದ ಅಭಿನಂದಿಸಿ ಪಟಾಕಿ ಸಿಡಿಸಿ ತಮ್ಮ ಮಕ್ಕಳ ಸಾಧನೆಗೆ ಸಂಭ್ರಮಿಸಿ ಸಿಹಿ ಹಂಚಿದರು.

ಈ ಸಂದರ್ಭದಲ್ಲಿ ಕ್ಷೇತ್ರ ದೈಹಿಕ ಪರಿವೀಕ್ಷಕರು ಬಾಲಚಂದ್ರರಾವ್, ನಿವೃತ್ತ ದೈಹಿಕ ಪರಿವೀಕ್ಷಕರಾದ ಈಶ್ವರಪ್ಪ, ಸಂಸ್ಥೆಯ ಸಂಸ್ಥಾಪಕ ಸಿ.ಕೆ.ಶಿವರಾಮ ಇತರರು ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.