ಅಪರಾಧ ಸುದ್ದಿ

ರಾಹುಲ್ ಗಾಂಧಿ ಕುರಿತ ಆಕ್ಷೇಪಾರ್ಹ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತನಿಗೆ ಹೈಕೋರ್ಟ್ ರಿಲೀಫ್

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪ ಎದುರಿಸುತ್ತಿದ್ದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಒದಗಿಸಿದೆ.

InShot 20260907 162817251

ಶಿವಮೊಗ್ಗ : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪ ಎದುರಿಸುತ್ತಿದ್ದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಒದಗಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

​ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿಯಾಗಿರುವ ರಾಜೇಶ್ ಹಿರಿಮನೆ ವಿರುದ್ಧ ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಎಲ್ಲಾ ವಿಚಾರಣಾ ಪ್ರಕ್ರಿಯೆಗಳಿಗೆ ಹೈಕೋರ್ಟ್ ಇದೀಗ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್ ಆದೇಶದ ಪ್ರಮುಖ ಅಂಶಗಳು:

  • ​ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಆದೇಶವನ್ನು ಹೊರಡಿಸಿದೆ.
    •​ ಹೊಸನಗರದ ಜೆಎಂಎಫ್‌ಸಿ (JMFC) ಮತ್ತು ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಈ ಪ್ರಕರಣದ ಮುಂದಿನ ಪ್ರಕ್ರಿಯೆಗಳನ್ನು ಮುಂದಿನ ವಿಚಾರಣೆಯವರೆಗೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.
  • ​ಪ್ರಕರಣದಲ್ಲಿ ರಾಜೇಶ್ ಅವರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಅವರ ಮಾರ್ಗದರ್ಶನದಲ್ಲಿ ವಕೀಲ ಸುಯೋಗ್ ಅವರು ವಾದ ಮಂಡಿಸಿದ್ದರು.

ಏನಿದು ಪ್ರಕರಣ?

​ರಾಜೇಶ್ ಹಿರಿಮನೆ ಅವರು ರಾಹುಲ್ ಗಾಂಧಿ ಅವರ ಭಾವಚಿತ್ರವನ್ನು ಪಾಕಿಸ್ತಾನದ ಸೇನಾ ಸರ್ವಾಧಿಕಾರಿ ಅಸಿಮ್ ಮುನೀರ್ ಅವರ ಮುಖದೊಂದಿಗೆ ಮಾರ್ಫ್ (ಎಡಿಟ್) ಮಾಡಿದ್ದರು. ಬಳಿಕ ಆ ಫೋಟೋಗೆ “ONE AGENDA” ಎಂಬ ಶೀರ್ಷಿಕೆ ನೀಡಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

​ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ, ಹೊಸನಗರ-ನಗರ ಠಾಣಾ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 353(2) ರ ಅಡಿಯಲ್ಲಿ ಸ್ವಯಂಪ್ರೇರಿತರಾಗಿ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಇದೀಗ ಈ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]