ಹೊಸನಗರ

ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಈ ಗ್ರಾಮದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು !

HOSANAGARA | ಮ(ಳೆ)ಲೆನಾಡಿನ ತವರೂರು ಎನಿಸಿಕೊಂಡಿರುವ ಹೊಸನಗರ ತಾಲೂಕಿನಾದ್ಯಂತ ಪುಷ್ಯ ಮಳೆಯಾರ್ಭಟ ಮುಂದುವರೆದಿದ್ದು, ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಚಕ್ರಾನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆಯಾಗಿದೆ.

WhatsApp Group Join Now
Telegram Group Join Now
Instagram Group Join Now

ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

  • ಚಕ್ರಾನಗರ : 275 mm
  • ಮಾಣಿ : 253 mm
  • ಸಾವೇಹಕ್ಲು : 230 mm
  • ಯಡೂರು : 206 mm
  • ಸುಳಗೋಡು : 182.2 mm
  • ಬಿದನೂರುನಗರ : 178 mm
  • ಹುಲಿಕಲ್ : 178 mm
  • ಮಾಸ್ತಿಕಟ್ಟೆ : 170 mm
  • ಕಾರ್ಗಲ್ (ಸಾಗರ) : 74.2 mm
  • ಹುಂಚ : 66 mm
  • ಹೊಸನಗರ : 46 mm
  • ಅರಸಾಳು : 30 mm
  • ರಿಪ್ಪನ್‌ಪೇಟೆ : 30 mm

ಲಿಂಗನಮಕ್ಕಿ ಜಲಾಶಯ :

1819 ಅಡಿ ಗರಿಷ್ಟ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಗುರುವಾರ ಬೆಳಿಗ್ಗೆ 8 ಗಂಟೆಗೆ 1802.70 ಅಡಿ ತಲುಪಿದ್ದು ಜಲಾಶಯಕ್ಕೆ 53371 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯ ಶೇ. 67.82ರಸ್ಟು ಭರ್ತಿಯಾಗಿದೆ. ಕಳೆದ ವರ್ಷ ಇದೇ ಅವಧಿಗೆ 1778.85 ಅಡಿ ದಾಖಲಾಗಿತ್ತು. ಬುಧವಾರ ಒಂದೇ ದಿನ ಜಲಾಶಯಕ್ಕೆ 1.70 ಅಡಿ ನೀರು ಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]