ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ ; ಹೊಸನಗರದ ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 13 ಸೆಂ.ಮೀ. ಮಳೆ ದಾಖಲು

Written by Mahesha Hindlemane

Published on:

ಹೊಸನಗರ ; ಮಳೆ(ಲೆ)ನಾಡಿನ ತವರೂರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ಶುಕ್ರವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 130 ಮಿ.ಮೀ. ಮಳೆ ದಾಖಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಉಳಿದಂತೆ ಹುಲಿಕಲ್ 113, ಸಾವೇಹಕ್ಲು 105, ಬಿದನೂರುನಗರ 108, ಮಾಣಿ 74, ಯಡೂರು 70, ಹೊಸನಗರ 65, ಲಿಂಗನಮಕ್ಕಿಯಲ್ಲಿ 56 ಮಿಲಿ ಮೀಟರ್ ಮಳೆ ದಾಖಲಾಗಿದೆ.

ಲಿಂಗನಮಕ್ಕಿ ಜಲಾಶಯ :

1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನಮಟ್ಟ 1789.45 ಅಡಿ ತಲುಪಿದ್ದು ಜಲಾಶಯಕ್ಕೆ 41036 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಗೆ 1760.10 ಅಡಿ ದಾಖಲಾಗಿತ್ತು.

ಶಾಲಾ, ಕಾಲೇಜುಗಳಿಗೆ ರಜೆ :

ಇನ್ನೂ ಧಾರಾಕಾರವಾಗಿ ಮಳೆ ಸುರಿಯುತ್ತಿರವ ಹಿನ್ನೆಲೆಯಲ್ಲಿ ಶಿವಮೊಗ್ಗ, ಹೊಸನಗರ, ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.

Leave a Comment