ಹೊಸನಗರ

ಹೊಸನಗರ ; ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 18 ಸೆಂ.ಮೀ. ಮಳೆ

ಹೊಸನಗರ ; ಮಲೆನಾಡಿನ ನಡುಮನೆ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಮಾಸ್ತಿಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 176 ಮಿ.ಮೀ. ಮಳೆ ದಾಖಲಾಗಿದೆ.

WhatsApp Group Join Now
Telegram Group Join Now
Instagram Group Join Now

ಉಳಿದಂತೆ ಹುಲಿಕಲ್ 138 ಮಿ.ಮೀ., ಯಡೂರು 107 ಮಿ.ಮೀ., ಸಾವೇಹಕ್ಲು 90 ಮಿ.ಮೀ., ಚಕ್ರಾನಗರ 80 ಮಿ.ಮೀ., ಮಾಣಿ 77 ಮಿ.ಮೀ., ಕಾರ್ಗಲ್ (ಸಾಗರ) 75.2, ಹೊಸನಗರ 50.4 ಮತ್ತು ಸೊನಲೆಯಲ್ಲಿ 48, ಮಿ.ಮೀ. ಮಳೆ ದಾಖಲಾಗಿದೆ.

1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಇಂದು ಬೆಳಗ್ಗೆ 8:00 ಗಂಟೆಗೆ 1764.85 ಅಡಿ ತಲುಪಿದ್ದು ಕಳೆದ ವರ್ಷ ಇದೇ ಅವಧಿಗೆ 1746.80 ಅಡಿ ದಾಖಲಾಗಿತ್ತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!