THIRTHAHALLI | Agumbe Ghat ಮಲೆನಾಡಿನಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆ (Heavy Rain) ಸುರಿಯುತ್ತಿದ್ದು ಪರಿಣಾಮ ಮಲೆನಾಡು ಮತ್ತು ಕರಾವಳಿಯನ್ನು ಬೆಸೆಯುವ ಪ್ರಮುಖ ಸಂಪರ್ಕ ಕೊಂಡಿಯಾದ ಆಗುಂಬೆ ಘಾಟಿಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸವಾರರು ಆತಂಕ ಪಡುವಂತಾಗಿದೆ.
Malenadu Rain | ಕಳೆದ 24 ಗಂಟೆಗಳಲ್ಲಿ ಹೊಸನಗರದ ಈ ಪ್ರದೇಶದಲ್ಲಿ ರಾಜ್ಯದಲ್ಲೇ ಅತ್ಯಧಿಕ ವರ್ಷಧಾರೆ, ಮಲೆನಾಡಿನ ಮತ್ತೆಲ್ಲೆಲ್ಲಿ ಎಷ್ಟು ಮಳೆಯಾಗಿದೆ ?
ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು, ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಸಂಚರಿಸುತ್ತಿವೆ.
ಈಗ ಆಗುಂಬೆ ಘಾಟಿಯ 4ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಆರಂಭವಾಗಿದ್ದು, ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ.
Agumbe Ghat
ಕಳೆದ 3 ವರ್ಷಗಳ ಹಿಂದೆ ಕೂಡ 6ನೇ ಸುತ್ತಿನಲ್ಲಿ ಘಾಟಿ ಕುಸಿದು ಸಂಚಾರ ಬಂದ್ ಆಗಿತ್ತು. ಇದೀಗ ಮತ್ತೆ ಗುಡ್ಡ ಕುಸಿದವಾದ ಪರಿಣಾಮ ಸಂಚಾರ ಬಂದ್ ಆಗುವ ಸಾಧ್ಯತೆಯಿದೆ. ರಸ್ತೆಯ ಮೇಲೆ ಕಲ್ಲುಗಳು ಬಿದ್ದಿದ್ದು ತೆರವು ಕಾರ್ಯಚರಣೆ ಆರಂಭವಾಗಿದೆ.