HOSANAGARA ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನವೆಂಬರ್ 12ರ ಮಂಗಳವಾರ ಇದೇ ಪ್ರಪ್ರಥಮ ಬಾರಿಗೆ ಕುವೆಂಪು ವಿಶ್ವವಿದ್ಯಾಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆ ನಡೆಯಲಿದೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಿ.ಜಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.
ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಉಮೇಶ್ ಕೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸ್ಪರ್ಧೆಯು ಪುರುಷರ ತಂಡವನ್ನು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊಫೆಸರ್ ಹೆಚ್.ಎನ್ ಈಶ್ವರಪ್ಪ ಹಾಗೂ ಮಹಿಳಾ ತಂಡವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ಡಾ ಕವಿತಾ ಪ್ರವೀಣ್ ಉದ್ಘಾಟಿಸಲಿರುವ ಈ ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರುಗಳು ಪಾಲ್ಗೊಳ್ಳಲಿದ್ದಾರೆ.

ಮಂಗಳವಾರ ಬೆಳಗ್ಗೆ 7:00ಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು ಸ್ಪರ್ಧಿಗಳು ಕಾಲೇಜು ಮುಂಭಾಗದಿಂದ ಕರಿನಗೊಳ್ಳಿ – ಹೊಟ್ಟುಕೆರೆ – ಗೇರುಪುರ ನೂತನ ಮೊರಾರ್ಜಿ ಶಾಲೆ ಮುಂಭಾಗದಿಂದ ಮಾವಿನಕೊಪ್ಪ ಮಾರ್ಗವಾಗಿ ಕಾಲೇಜು ಮುಂಭಾಗಕ್ಕೆ ಬಂದು ಒಟ್ಟು 10 ಕಿಲೋ ಮೀಟರ್ ದೂರವನ್ನು ಕ್ರಮಿಸಲಿದ್ದಾರೆ. ತದನಂತರ ಕ್ರೀಡಾ ಸಮರೋಪ ಸಮಾರಂಭ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆಯಲಿದ್ದು ಶಾಸಕರು ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷರು ಕಾಲೇಜು ಅಭಿವೃದ್ಧಿ ಸಮಿತಿ ಆದ ಬೇಳೂರು ಗೋಪಾಲಕೃಷ್ಣರವರು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.