ಹಿಂಡ್ಲೆಮನೆ ; ಮಳೆಹಾನಿ ಪ್ರದೇಶಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ, ಪರಿಶೀಲನೆ

Written by malnadtimes.com

Published on:

ರಿಪ್ಪನ್‌ಪೇಟೆ ; ಕಳೆದ ಬುಧವಾರ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

WhatsApp Group Join Now
Telegram Group Join Now
Instagram Group Join Now

ಕೋಡೂರು ಗ್ರಾ.ಪಂ ವ್ಯಾಪ್ತಿಯ ಹುಂಚ ಹೋಬಳಿ ಹಿಂಡ್ಲೆಮನೆಯಲ್ಲಿ ಕಳೆದ ಬುಧವಾರ ಏಕಾಏಕಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು ಇದರಿಂದ ನೂರಾರು ಅಡಿಕೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/167n3Kq2Xd/

ಅಲ್ಲದೆ ವಿದ್ಯುತ್ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿರುವುದರಿಂದ ಕುಡಿಯುವ ನೀರಿನ ಅಭಾವ ಉಂಟಾಗಿದ್ದು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಜಿಲ್ಲಾಧಿಕಾರಿಗೆ ಹಾಗೂ ಕೆಪಿಟಿಸಿಎಲ್ ಎಂಡಿಗೆ ದೂರವಾಣಿ ಮುಖಾಂತರ ಮಾತನಾಡಿ ತುರ್ತು ಕಾರ್ಯಗೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ಚಂದ್ರಮೌಳಿ, ಜಿ.ಪಂ. ಮಾಜಿ ಸದಸ್ಯ ಬಿ.ಪಿ ರಾಮಚಂದ್ರ, ಗ್ರಾ.ಪಂ ಸದಸ್ಯರಾದ ಕಲಗೋಡು ಉಮೇಶ್, ಮಂಜಪ್ಪ, ಮುಖಂಡರಾದ ವೆಂಕಟೇಶ್, ಗಂಗಾಧರ್, ನರೇಂದ್ರ, ವಸಂತ್ ಕುಮಾರ್ ಗಣೇಶ್, ವಾಸುದೇವ್, ಶೇಖರ್, ಮೆಸ್ಕಾಂ ಇಲಾಖೆಯ ಜೆಇ ಅಶ್ವಲ್, ಸಿಬ್ಬಂದಿಗಳು, ಇನ್ನಿತರರು, ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Comment