ರಿಪ್ಪನ್ಪೇಟೆ ; ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 1975 ರಲ್ಲಿ ಪ್ರಾರಂಭವಾಗಿದ್ದು 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶಾಲಾ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ಗುರುವಂದನೆ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಎಸ್ಡಿಎಂಸಿ, ಶಾಲಾ ಸುವರ್ಣ ಮಹೋತ್ಸವ ಆಚರಣಾ ಸಮಿತಿ ಹಾಗೂ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಡಿ.27ರ ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಡಿಎಂಸಿ ಅಧ್ಯಕ್ಷ ದೇವರಾಜ್ ಹೆಚ್.ಕೆ. ತಿಳಿಸಿದರು.
ಶಾಲೆಯಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಘನ ಉಪಸ್ಥಿತರಿರಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಭದ್ರಾವತಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ಲ್ಯಾಂಡ್ ಆರ್ಮಿ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ ಆಗಮಿಸಲಿದ್ದಾರೆ. ಬಹುಮಾನ ವಿತರಣೆಯನ್ನು ಸಾಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ನೆರವೇರಿಸಲಿದ್ದು, ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಎಸ್ಡಿಎಂಸಿ ಅಧ್ಯಕ್ಷ ದೇವರಾಜ ಹೆಚ್.ಕೆ., ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ, ಎಂಎಲ್ಸಿಗಳಾದ ಎಸ್.ಎಲ್. ಭೋಜೇಗೌಡ, ಎಸ್. ಭಾರತಿಶೆಟ್ಟಿ, ಡಿ.ಎಸ್. ಅರುಣ್, ಡಾ|| ಧನಂಜಯ ಸರ್ಜಿ, ಬಿಲ್ಕೀಶ್ ಬಾನು ಹಾಗೂ ಕೋಡೂರು ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ತಹಸೀಲ್ದಾರ್ ಭರತ್ರಾಜ್ ಕೆ.ಎನ್., ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ, ಸೇರಿದಂತೆ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಇನ್ನೂ ಸಂಜೆ 7.00 ಗಂಟೆಗೆ ಸರಿಯಾಗಿ ಶಾಲಾ ಆವರಣದಲ್ಲಿ ಹಾಕಿರುವ ಭವ್ಯ ರಂಗ ಮಂಟಪದಲ್ಲಿ ಸ್ಥಳೀಯ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಂದ ‘ವಿವಿಧ ಸಾಂಸ್ಕೃತಿಕ ಮತ್ತು ಮನರಂಜನಾ’ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವಿವರಿಸಿದ ಅವರು, ಮಧ್ಯಾಹ್ನ ಹಾಗೂ ಸಂಜೆ ಊಟದ ವ್ಯವಸ್ಥೆ ಸಹ ಇರಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಹಾಗೂ ಶಾಲಾ ಸುವರ್ಣ ಮಹೋತ್ಸವ ಆಚರಣಾ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಇದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





