ರಿಪ್ಪನ್‌ಪೇಟೆ ; ಚಿಂತಕರು, ಕುಶಲ ಕರ್ಮಿಗಳು, ಸಾಹಿತಿಗಳು, ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿದ್ದ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಷಣ್ಮುಖಪ್ಪ ಕೆ. (90) ಇಂದು (ಸೆ.19) ಮಧ್ಯಾಹ್ನ 12:50ಕ್ಕೆ ನಿಧನರಾದರು.

ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಸಂಜೆ 7:00 ಗಂಟೆಗೆ ಹಿಂಡ್ಲೆಮನೆಯ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಂತಾಪ ;
ಷಣ್ಮುಖಪ್ಪರ ನಿಧನಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿ.ಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ಕೋಡೂರು ಗ್ರಾಪಂ ಸದಸ್ಯರಾದ ಶೇಖರಪ್ಪ, ಅನ್ನಪೂರ್ಣ ಮಹೇಶ, ಚಂದ್ರಕಲಾ ಸೇರಿದಂತೆ ಅನೇಕರು ತೀವ್ರ ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.