ಹೊಸನಗರ

ಮೂಢನಂಬಿಕೆ ಬಿಡಿ, ನೈಜತೆ ಅರಿಯಿರಿ: ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ HIV ಜಾಗೃತಿ ಪಾಠ

ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯವು ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, HIV ಸೋಂಕಿನ ಕುರಿತು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಆಪ್ತ ಸಮಾಲೋಚಕಿ ಸುಷ್ಮಾ ಹೆಬ್ಬಾರ್ ಕರೆ ನೀಡಿದರು.

Kodachadri College Hosanagara 1

ಹೊಸನಗರ: ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯವು ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, HIV ಸೋಂಕಿನ ಕುರಿತು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಆಪ್ತ ಸಮಾಲೋಚಕಿ ಸುಷ್ಮಾ ಹೆಬ್ಬಾರ್ ಕರೆ ನೀಡಿದರು.

WhatsApp Group Join Now
Telegram Group Join Now
Instagram Group Join Now

ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಿಜಿಟಲ್ ಕೊಠಡಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ರೆಡ್ ರಿಬ್ಬನ್ ಕ್ಲಬ್ ಸಹಯೋಗದಲ್ಲಿ ಬುಧವಾರ ಆಯೋಜಿಸಲಾಗಿದ್ದ ‘HIV/AIDS ಜಾಗೃತಿ ಕಾರ್ಯಕ್ರಮ’ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

“ವಿವಾಹಪೂರ್ವ ಹಾಗೂ ಅಸುರಕ್ಷಿತ ಲೈಂಗಿಕ ಸಂಪರ್ಕ ಮತ್ತು ಸುರಕ್ಷತೆಯಿಲ್ಲದ ರಕ್ತಪೂರೈಕೆಯಿಂದ ಯುವಜನತೆ ದೂರವಿರಬೇಕು. HIV ಹರಡುವಿಕೆಯನ್ನು ತಡೆಯಲು ಅದರ ಕುರಿತಾದ ಮೂಢನಂಬಿಕೆಗಳನ್ನು ತೊಡೆದುಹಾಕಿ, ವಾಸ್ತವವನ್ನು ತಿಳಿದುಕೊಳ್ಳುವುದು ಅತ್ಯಗತ್ಯ. ಇದೇ ವೇಳೆ LGBTQ ಸಮುದಾಯದ ಬಗೆಗೂ ಅರಿವು ಅಗತ್ಯವಿದ್ದು, ಅಂತಹ ಯಾವುದೇ ದೈಹಿಕ ಅಥವಾ ಮಾನಸಿಕ ಬದಲಾವಣೆಗಳು ಕಂಡುಬಂದಲ್ಲಿ ಆಪ್ತ ಸಮಾಲೋಚಕರ ನೆರವು ಪಡೆಯಬೇಕು,” ಎಂದು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಎನ್‌ಎಸ್‌ಎಸ್ ಹಾಗೂ ರೆಡ್ ರಿಬ್ಬನ್ ಕ್ಲಬ್ ಕಾರ್ಯಕ್ರಮಾಧಿಕಾರಿ ಮೇದಿನಿ ಕೆ. ಎಸ್., “ಯುವಜನತೆ ದಾರಿ ತಪ್ಪದಂತೆ ಮನಸ್ಸನ್ನು ಹತೋಟಿಯಲ್ಲಿಡಲು ಯೋಗ, ಧ್ಯಾನ, ಪ್ರಾಣಾಯಾಮ ಹಾಗೂ ಸಾಮಾಜಿಕ ಕೆಲಸಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ದುಶ್ಚಟಗಳಿಂದ ದೂರವಿದ್ದು ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಸಾಧ್ಯ,” ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ದೊಡ್ಡಯ್ಯ ಹೆಚ್. ಮಾತನಾಡಿ, “ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜತೆಗೆ ಲೈಂಗಿಕ ಮತ್ತು ಮಾನಸಿಕ ಆರೋಗ್ಯದ ಕುರಿತಾದ ಸಮಗ್ರ ಅರಿವು ಹೊಂದುವುದು ಇಂದಿನ ಅಗತ್ಯವಾಗಿದೆ,” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ‘Know Your HIV Status’ ಡಿಜಿಟಲ್ ಲಿಂಕ್ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವ-ಅರಿವು ಮೂಡಿಸಲಾಯಿತು ಹಾಗೂ ಉಪಸ್ಥಿತರಿದ್ದ ಎಲ್ಲರಿಗೂ HIV/AIDS ಕುರಿತ ಮಾಹಿತಿ ಕೈಪಿಡಿಯನ್ನು ವಿತರಿಸಲಾಯಿತು.

ವಿದ್ಯಾರ್ಥಿನಿ ತ್ರಿವೇಣಿ ಪ್ರಾರ್ಥಿಸಿದರು. ಪ್ರೇಮಾ ಸ್ವಾಗತಿಸಿದರು. ಸಂಹಿತಾ ಕಾರ್ಯಕ್ರಮ ನಿರೂಪಿಸಿದರು. ಶೋಭಿತಾ ವಂದಿಸಿದರು. ಕಾಲೇಜಿನ ಬೋಧಕ ವರ್ಗ ಹಾಗೂ 120ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]