ಹೊಸನಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.25) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.
ಇಂದು ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಜು.25ರ ಶುಕ್ರವಾರ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಾಗರ ತಾಲೂಕಿನ ಶಾಲೆಗಳಿಗೂ ನಾಳೆ ರಜೆ
ಈಗಾಗಲೇ ಸಾಗರ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಿ ತಹಸೀಲ್ದಾರ್ ಆದೇಶಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

