ತೀರ್ಥಹಳ್ಳಿ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜು.25) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ.

ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜು.25ರ ಶುಕ್ರವಾರ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನೂ ಹೊಸನಗರ ಮತ್ತು ಸಾಗರ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೂ ಆಯಾ ತಾಲೂಕಿನ ತಹಸೀಲ್ದಾರ್ ಇಂದು ರಜೆ ಘೋಷಣೆ ಮಾಡಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

