ಸಾಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.25) ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ.
ಇಂದು (ಜು.24) ಸಾಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ (ಜು.25) ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಜು.25ರ ಶುಕ್ರವಾರ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

