ಹೊಸನಗರ ; ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.4) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಜು.04 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ. ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

