Hosanagara

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಹೊಸನಗರ ; ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.3) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.03 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ. ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>