ಸಾಗರ ; ತಾಲೂಕಿನಾದ್ಯಂತ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜು.4) ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಸಾಗರ ತಹಸೀಲ್ದಾರ್ ಆದೇಶಿಸಿದ್ದಾರೆ.
ಇನ್ನೂ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ಇಂದು (ಶುಕ್ರವಾರ) ರಜೆ ಘೋಷಿಸಿ ಈಗಾಗಲೇ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

