ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಜು. 03 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ಪದವಿ (ಪೂರ್ವ ಕಾಲೇಜುಗಳಿಗೆ ಮಾತ್ರ) ರಜೆಯನ್ನು ಘೋಷಿಸಿದೆ ಹಾಗೂ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನೂ ಭಾರಿ ಮಳೆಯಾಗುತ್ತಿರವ ಹಿನ್ನೆಲೆಯಲ್ಲಿ ಈಗಾಗಲೇ ಹೊಸನಗರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!