SHIVAMOGGA ; ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ನಿನ್ನೆಯಿಂದ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ (ಪಿಯು ಕಾಲೇಜುಗಳಿಗೆ ಮಾತ್ರ) ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಈ ಸಂಬಂಧ ಆದೇಶ ಹೊರಡಿಸಿರುವ ಡಿಸಿ, ಜಿಲ್ಲೆಯಲ್ಲಿ ಡಿ.3 ಮತ್ತು 4ರಂದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.
ಡಿ.3ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.