Shivamogga

ಫೆಂಗಲ್ ಸೈಕ್ಲೋನ್ ಎಫೆಕ್ಟ್ ; ಶಿವಮೊಗ್ಗ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

SHIVAMOGGA ; ಫೆಂಗಲ್‌ ಚಂಡಮಾರುತ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ನಿನ್ನೆಯಿಂದ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ (ಪಿಯು ಕಾಲೇಜುಗಳಿಗೆ ಮಾತ್ರ) ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಸಂಬಂಧ ಆದೇಶ ಹೊರಡಿಸಿರುವ ಡಿಸಿ, ಜಿಲ್ಲೆಯಲ್ಲಿ ಡಿ.3 ಮತ್ತು 4ರಂದು ಆರೆಂಜ್‌ ಮತ್ತು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.

ಡಿ.3ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>