ತೀರ್ಥಹಳ್ಳಿ ; ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜೂ.27) ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ನಿರ್ದೇಶನದಂತೆ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಜೂ.27 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.