ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ನಾಳೆಯೂ (ಆಗಸ್ಟ್ 19) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಎಲ್ಲೆಲ್ಲಿ ರಜೆ ?
ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ, ಕಳಸ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗಳಿಗೆ, ತರೀಕೆರೆ ತಾಲೂಕಿನ ಲಿಂಗದಹಳ್ಳಿ ಮತ್ತು ಲಕ್ಕವಳ್ಳಿ ಹೋಬಳಿ ವ್ಯಾಪ್ತಿಗೆ ಮಂಗಳವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.