ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 5 ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ನಾಳೆ (ಜು.26) ರಜೆ ಘೋಷಣೆ ಮಾಡಲಾಗಿದೆ.

ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಹಾಗೂ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿಯ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

