ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ 5 ತಾಲೂಕಿನ ಶಾಲೆಗಳಿಗೆ ನಾಳೆ (ಜು.3) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಜಿಲ್ಲೆಯ ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ, ಮೂಡಿಗೆರೆ ತಾಲೂಕು ವ್ಯಾಪ್ತಿಯ ಹಾಗೂ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಜಾಗರ, ಖಾಂಡ್ಯ, ಆಲ್ದೂರು ಮತ್ತು ವಸ್ತಾರೆ ಹೋಬಳಿಯ ಶಿಶುಪಾಲನ ಕೇಂದ್ರಗಳು, ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜು. 3 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.