ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯ 05 ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆಯೂ (ಜೂ.27) ಕೂಡ ರಜೆ ನೀಡಿ ಡಿಸಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಜಿಲ್ಲೆಯ ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲ್ಲೂಕಿನಲ್ಲಿ ತೀವ್ರವಾಗಿ ಮಳೆಯಾಗುತ್ತಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಜೂ. 27 ರಂದು ರಜೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಾಳೆ ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ, ನರಸಿಂಹರಾಜಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಇರಲಿದೆ. ಎಲ್ಲಾ ಶಾಲೆಗಳು ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿ ನಿರ್ವಹಿಸಲು ಸೂಚಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.