ಶಿವಮೊಗ್ಗ ತಾಲೂಕಿನ ಶಾಲೆಗಳಿಗೂ ಇಂದು ರಜೆ ಘೋಷಣೆ

Written by Mahesha Hindlemane

Published on:

ಶಿವಮೊಗ್ಗ : ತಾಲ್ಲೂಕಿನಾದ್ಯಂತ ವ್ಯಾಪಾಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು (ಜು.04) ರಜೆ ಘೋಷಿಸಿ ತಹಸೀಲ್ದಾರ್ ವಿ.ಎಸ್ ರಾಜೀವ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಈ ರಜಾ ಅವಧಿಯಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಲಾಗಿದೆ.

ಇನ್ನೂ ಈಗಾಗಲೇ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಆಯಾ ತಾಲೂಕಿನ ತಹಸೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

ಶಿವಮೊಗ್ಗ ತಾಲ್ಲೂಕಿನಾದ್ಯಂತ ವ್ಯಾಪಾಕವಾಗಿ ಸುರಿಯುತ್ತಿರುವ ಬಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ & ಪ್ರೌಢ ಶಾಲೆಗಳಿಗೆ ದಿನಾಂಕ:04.07.2025ರ ಶುಕ್ರವಾರದಂದು ರಜೆ ಘೋಷಿಸಿದೆ. ಸದರಿ ರಜಾ ಅವಧಿಯಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ.
– ತಹಶೀಲ್ದಾರ್ ಮತ್ತು ತಾಲ್ಲೂಕು ದಂಡಾಧಿಕಾರಿ,
ಶಿವಮೊಗ್ಗ ತಾಲ್ಲೂಕು

Leave a Comment