ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿಗಳಿಗೆ ನಾಳೆಯೂ ರಜೆ !

Written by Mahesha Hindlemane

Published on:

ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ (ಜು.5 ಶನಿವಾರ) ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now

ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಕಾರಣ ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಕಲಿ ಆದೇಶ ಪ್ರತಿ !
ಇದಕ್ಕೂ ಮೊದಲು ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ನಕಲಿ ಆದೇಶ ಪ್ರತಿ ಹೊರ ಬಿದ್ದು ಗೊಂದಲ ಮೂಡಿತ್ತು. ಆ ನಂತರ ಮಕ್ಕಳು, ಪೋಷಕರಲ್ಲಿ ರಜೆ ಬಗ್ಗೆ ಗೊಂದಲ ನಿರ್ಮಾಣವಾಗಿತ್ತು. ಹೀಗಾಗಿ ಚಿಕ್ಕಮಗಳೂರು ಡಿಸಿ ಮೀನಾ ನಾಗರಾಜ್, ನಾಳೆ ಅಂಗನವಾಡಿಗಳಿಗೆ ಮಾತ್ರವೇ ರಜೆ ನೀಡಿರುವುದಾಗಿ ಅಧಿಕೃತ ಆದೇಶ ಹೊರಡಿಸಿ  ತಿಳಿಸಿದ್ದಾರೆ.

Leave a Comment