Hosanagara

BREAKING NEWS | ಭಾರಿ ಮಳೆ ಹಿನ್ನೆಲೆ ; ಹೊಸನಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ಇಂದು ರಜೆ !

ಹೊಸನಗರ : ತಾಲ್ಲೂಕಿನಾದ್ಯಂತ ಅತಿಯಾದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲ್ಲೂಕಿನಾದ್ಯಂತ ಇಂದು (ಜು.06) ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಪಿ.ಯು. ಕಾಲೇಜುಗಳಿಗೆ ರಜೆ ಘೋಷಿಸಿ ಹೊಸನಗರ ತಹಸೀಲ್ದಾರ್ ಭರತ್‌ರಾಜ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ರಜೆ ದಿನದಂದು ನಡೆಯಬೇಕಾಗಿದ್ದ, ಪಾಠ ಪ್ರವಚನಗಳನ್ನು ಮುಂದಿನ ಸಾರ್ವತ್ರಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ತಿಳಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>