ಶಿವಮೊಗ್ಗ

ಭಾರಿ ಮಳೆ ; ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ನಾಳೆ ರಜೆ !

ಶಿವಮೊಗ್ಗ ; ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆ.18) ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now

ತಹಸೀಲ್ದಾರ್ ಆದೇಶ ;

ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಹೊಸನಗರ ಮತ್ತು ಸಾಗರ ತಾಲ್ಲೂಕಿನಲ್ಲಿ ಅತಿಯಾದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ಮತ್ತು ಸಾಗರ ತಾಲ್ಲೂಕಿನಾದ್ಯಂತ ಆ.18 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ ಹಾಗೂ ಸದರಿ ರಜೆ ದಿನದಂದು ನಡೆಯಬೇಕಾಗಿದ್ದ. ಪಾಠ ಪ್ರವಚನಗಳನ್ನು ಮುಂದಿನ ಸಾರ್ವತ್ರಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶಿಸಲಾಗಿದೆ ಎಂದು ಸಾಗರ ಮತ್ತು ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕಿನ ಶಾಲಾ ಕಾಲೇಜುಗಳಿಗೂ ರಜೆ

ಇನ್ನೂ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆ.18)  ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!