ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ವರ್ಷಧಾರೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ನಾಳೆ (ಜು.4) ರಜೆ ಘೋಷಣೆ ಮಾಡಲಾಗಿದೆ.

ಕಳಸ, ಶೃಂಗೇರಿ, ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಶಿಶುಪಾಲನ ಕೇಂದ್ರಗಳು, ಅಂಗನವಾಡಿ ಮತ್ತು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜುಲೈ 4ರ ಶುಕ್ರವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

