ರಿಪ್ಪನ್‌ಪೇಟೆ : ಭಾರತೀಯ ಜನತಾ ಪಕ್ಷದ ನಿಕಟಪೂರ್ವ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನಕುಮಾರ್ ಕಟೀಲ್ ಸೆ.19 ರಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ, ಅಭಿಷ್ಟವರಪ್ರದಾಯಿನಿ ಯಕ್ಷಿಶ್ರೀ ಪದ್ಮಾವತಿ ದೇವಿ ದರ್ಶನ ಪಡೆದು ಪೂಜೆ ಸಮರ್ಪಿಸಿದರು.
ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರಿಗೆ ಭಕ್ತಿ ಗೌರವ ಸಮರ್ಪಿಸಿ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಎಸ್.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಬಾಲ್ಯೊಟ್ಟು ಶಶಿಕುಮಾರ್ ರೈ., ಪುತ್ತೂರು ನಗರಸಭಾ ಮಾಜಿ ಅಧ್ಯಕ್ಷ ಕೆ. ಜೀವಂಧರ ಜೈನ್, ಪುತ್ತೂರು ನಗರಾಭಿವೃದ್ಧಿ ಮಾಜಿ ಅಧ್ಯಕ್ಷ ಭಾಮಿ ಅಶೋಕ ಶೆಣೈ, ಬಿಜೆಪಿ ನಾಯಕ ಜಗದೀಶ ಅಧಿಕಾರಿ, ಹಿರಿಯ ಬಿಜೆಪಿ ನಾಯಕ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ನಲ್ಲೂರು ಮಹಾವೀರ ಜೈನ್, ಸವಣೂರು ರಾಜಾರಾಂ ನಾಯಕ, ರಂಜಿತ್ ಮಲ್ಲ, ಕಿರಣ್ ರೈ. ಮುಂತಾದವರು ಶ್ರೀಗಳವರಿಂದ ಶ್ರೀಮಂತ್ರಾಕ್ಷತೆ ಪಡೆದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.