Ripponpete

ಚೆನ್ನಮ್ಮ ನಿಧನಕ್ಕೆ ಹೊಂಬುಜ ಶ್ರೀಗಳ ಸಂತಾಪ

ಚೆನ್ನಮ್ಮ ನಿಧನಕ್ಕೆ ಹೊಂಬುಜ ಶ್ರೀಗಳ ಸಂತಾಪ – InShot 20260718 215031744

ಹೊಂಬುಜ ; ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ತಾಯಿ ಚೆನ್ನಮ್ಮರವರು ತಮ್ಮ 89ನೇ ವಯಸ್ಸಿನಲ್ಲಿ ಸ್ವರ್ಗಸ್ಥರಾದ ವಿಷಯ ತಿಳಿದು ಅತೀವ ದುಃಖವಾಯಿತು ಎಂದು ಹೊಂಬುಜ ಜೈನ ಮಠದ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇವರು ತಮ್ಮ ಸರಳತೆ, ಸಂಸ್ಕಾರ ಮತ್ತು ಕುಟುಂಬ ಮೌಲ್ಯಗಳ ಸಾಕಾರ ಮೂರ್ತಿಯಾಗಿದ್ದರು. ಇವರು ಧರ್ಮ ಕಾರ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು ಆದರ್ಶ ಗೃಹಿಣಿಯಾಗಿ ಧರ್ಮ ಪಾಲನೆ, ಆಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಇವರ ಧರ್ಮನಿಷ್ಠೆ, ಸೇವಾಕಾರ್ಯ ಸಮಾಜ ಬಾಂಧವರೊಡನೆ ಆತ್ಮೀಯ ಸಂಬಂಧಗಳ ಸ್ಮರಣೆ ಸದಾ ಇರುವುದು. ನಡೆದಾಡುವ ಸರಸ್ವತಿಯಾಗಿದ್ದ ಇವರು ಮಾನವೀಯ ಮೌಲ್ಯಗಳನ್ನು ಸಮಾಜದಲ್ಲಿ ವೃದ್ಧಿಸುವಂತೆ ಸದಾಕಾಲ ಪ್ರಯತ್ನಿಸುತ್ತಿದ್ದರು. ಮಾತೃ ಸಮಾನರಾದ ಇವರ ಅಗಲಿಕೆಯಿಂದ ದೇವೇಗೌಡರ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ತೀವ್ರ ಆಘಾತವುಂಟಾಗಿದೆ.

ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಅಭೀಷ್ಟವರ ಪ್ರದಾಯಿನಿ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಅಗಲಿದ ಚೆನ್ನಮ್ಮರವರ ಆತ್ಮಕ್ಕೆ ಶಾಂತಿ ನೀಡಲೆಂದು, ದೇವೇಗೌಡರಿಗೂ ಅವರ ಸಕುಟುಂಬಸ್ಥರಿಗೆ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇವೆ ಎಂದು ತಮ್ಮ ಶೋಕ ಸಂದೇಶದಲ್ಲಿ ಶ್ರೀಗಳು ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]