RIPPONPETE ; ಭಾರತದ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ ಕೇಂದ್ರ ಸಂಪುಟದಲ್ಲಿ ಗುರುವಾರ ನಡೆದ ಸಭೆಯಲ್ಲಿ ಪ್ರಾಕೃತ ಭಾಷೆಗೆ ಶಾಸ್ತ್ರಿಯ ಸ್ಥಾನಮಾನ ನೀಡಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದು ಹೊಂಬುಜ ಜೈನ ಮಠ ಪರಮಪೂಜ್ಯ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು.
ಸಮೀಪದ ಹೊಂಬುಜ ಮಠದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, 2004 ಅಕ್ಟೋಬರ್ 12ರಂದು ಶಾಸ್ತ್ರೀಯ ಭಾಷೆ ಸ್ಥಾನವನ್ನು ನೀಡಲು ಸರ್ಕಾರವು ನಿರ್ಧರಿಸಿತ್ತು. ಪ್ರಸ್ತುತ ಪ್ರಾಕೃತ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಿ, ಪ್ರಾಕೃತ ಭಾಷೆಯನ್ನು ಬೆಳೆಸುವ ಮುಂದಿನ ಜನಾಂಗಕ್ಕೆ ಭಾಷೆಯ ಪರಿಚಯದ ಪ್ರಧಾನಿಯವರ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.