ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ 1008 ಶ್ರೀ ಪಾರ್ಶ್ವನಾಥ ಸ್ವಾಮಿ ಲೋಕಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರೀ ಪದ್ಮಾವತಿ ದೇವಿ ಆರಾಧನೆಯ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಂಡಿತು.

ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ಸಸಂಘಸ್ಥ ಮುನಿಶ್ರೀ, ಆರ್ಯಿಕೆಯರ ಉಪಸ್ಥಿತಿಯಲ್ಲಿ ಸಾಂಗವಾಗಿ ನೆರವೇರಿತು. ಊರ-ಪರವೂರ ಭಕ್ತವೃಂದದವರು ಪೂಜಾ ವಿಧಿಗಳಲ್ಲಿ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.
ಹೊಂಬುಜ ಪೀಠಾಧಿಪತಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಆರಾಧನೆಯಲ್ಲಿ ಸಾನಿಧ್ಯ, ಉಪಸ್ಥಿತಿ ನೀಡಿದರು.

ವಾದ್ಯ, ಸಂಗೀತ, ಸುಶ್ರಾವ್ಯ ಭಜನೆಗಳೊಂದಿಗೆ ಪಾಲ್ಗೊಂಡ ಭಕ್ತವೃಂದದವರು ಶ್ರೀಫಲ ಮಂತ್ರಾಕ್ಷತೆ ಸ್ವೀಕರಿಸಿ ಧನ್ಯರಾದರು.