Hombuja

ಹೊಸನಗರ ವಿಧಾನಸಭಾ ಕ್ಷೇತ್ರಕ್ಕಾಗಿ ಹೊಂಬುಜ ಶ್ರೀಗಳ ಆಗ್ರಹ

ಹೊಂಬುಜ ; ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್‌ಸ್ಥಾಪನೆಗಾಗಿ ಬೃಹತ್ ಹೋರಾಟ ನಡೆಯುತ್ತಿದ್ದು, ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೋಸ್ಕರ ಪುನರ್‌ಸ್ಥಾಪನೆ ತುಂಬಾ ಅವಶ್ಯವಾಗಿದೆ ಎಂದು ಹೊಂಬುಜ ಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ ಅವರು, ಅರಣ್ಯ ಭೂಮಿಯು ಹೆಚ್ಚು ವ್ಯಾಪಿಸಿದ್ದು, ವಿಸ್ತೀರ್ಣದಲ್ಲಿ ದೊಡ್ಡದಿದೆ. ಇಲ್ಲಿಯ ಗ್ರಾಮೀಣ ಪ್ರದೇಶಗಳಿಗೆ ಎಲ್ಲಾ ಸೌಕರ್ಯಗಳು ಸರಿಯಾಗಿ ತಲುಪದೇ ಆರ್ಥಿಕವಾಗಿ ಹಿನ್ನಡೆಯಾಗಿದೆ. ಶೈಕ್ಷಣಿಕ, ಸಾಮಾಜಿಕ, ಭೌಗೋಳಿಕ ಹೀಗೆ ನಾನಾ ಕಾರಣಗಳಿಗಾಗಿ ವಿಧಾನಸಭಾ ಕ್ಷೇತ್ರದ ಮರುಸ್ಥಾಪನೆ ಅಗತ್ಯವಾಗಿದೆ.

ಈ ಸಮಗ್ರ ಹೋರಾಟಕ್ಕೆ ಸಮರ್ಥನೆ ಕೊಟ್ಟು ವಿಧಾನಸಭಾ ಕ್ಷೇತ್ರ ಪುನರ್‌ಸ್ಥಾಪನೆ ಮಾಡಬೇಕೆಂದು ಸ್ವಾಮೀಜಿಯವರು ಆಗ್ರಹಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!