Home guard job in shivamogga : ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕ ದಳದ ಒಟ್ಟು 189 ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆಗಳೇನು ?
ಭಾರತೀಯ ಪೌರತ್ವ ಮತ್ತು ವಯಸ್ಸಿನ ಮಿತಿ 19 ಮತ್ತು 45 ವರ್ಷಗಳ ನಡುವೆ ಇರಬೇಕು. 10ನೇ ತರಗತಿ ಪ್ರಮಾಣಪತ್ರ (ಎಸ್‌ಎಸ್‌ಎಲ್‌ಸಿ ತೇರ್ಗಡೆ) ಹೊಂದಿರುವುದು ಕಡ್ಡಾಯ. ವೈದ್ಯಕೀಯವಾಗಿ ಆರೋಗ್ಯವಾಗಿರುವವರು ಮತ್ತು ಯಾವುದೇ ಕ್ರಿಮಿನಲ್ ಮೊಕದ್ದಮೆಗಳು/ಆರೋಪಗಳು ಅಥವಾ ಪೊಲೀಸ್ ಅಪರಾಧಗಳನ್ನು ಹೊಂದಿರದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ ?
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಮದೇಷ್ಟರ ಕಛೇರಿ, ಗೃಹರಕ್ಷಕ ದಳ, ಶಾಂತಾ ಮಹಡಿ, 2ನೇ ಮಹಡಿ, ಗಾಂಧಿನಗರ ಮುಖ್ಯರಸ್ತೆ, ಶಿವಮೊಗ್ಗ ಅಥವಾ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 12 ರೊಳಗಾಗಿ ಸಲ್ಲಿಸಬೇಕು.
Read More
PMAY :ಮನೆಯಿಲ್ಲದ ಮಹಿಳೆಯರಿಗೆ ಶುಭ ಸುದ್ದಿ ಈ ಯೋಜನೆಯಲ್ಲಿ ಪಡೆಯಬಹುದು ಮನೆ !
HOSANAGARA | ಬಿಜೆಪಿ ಕಾರ್ಯಕರ್ತ ಸತೀಶ್ ಶೇಟ್ ನಿಧನ !
MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650