ಶಿವಮೊಗ್ಗ ; ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಹಿರಿಯ ಮುತ್ಸದ್ದಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮತ್ತು ಮುಂಬೈನ ವಿಜ್ಞಾನಿ ಸಿ.ಎಸ್. ಉನ್ನಿಕೃಷ್ಣನ್ ಮತ್ತು ಭದ್ರಾವತಿಯ ಯೋಗಗುರು ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ವಿಶ್ವ ವಿದ್ಯಾಲಯದ ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಶಂಕರಘಟ್ಟದ ಬಸವ ಸಭಾಭವನದಲ್ಲಿ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಶರತ್ ಅನಂತ್ ಮೂರ್ತಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.