ಹೊಸನಗರ ; ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜನಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ 78.57% ಫಲಿತಾಂಶ ಬಂದಿದೆ ಎಂದು ಈ ಕಾಲೇಜಿನ ಪ್ರಾಂಶುಪಾಲ ಸ್ವಾಮಿರಾವ್ ತಿಳಿಸಿದರು.

ಕಲಾ ವಿಬಾಗದಲ್ಲಿ ಒಟ್ಟು 105 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 87 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 82.86% ಬಂದಿರುತ್ತದೆ. ವಾಣಿಜ್ಯ ವಿಭಾಗದಲ್ಲಿ 138 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 110 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ 79.71% ಬಂದಿರುತ್ತದೆ. ವಿಜ್ಞಾನ ವಿಭಾಗದಲ್ಲಿ 51 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 34 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 78.57% ಉತ್ತೀರ್ಣರಾಗಿದ್ದು ಒಟ್ಟಾರೆಯಾಗಿ ಒಟ್ಟು 294 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 231 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಒಟ್ಟು 37 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು 138 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 48 ವಿದ್ಯಾರ್ಥಿಗಳು ದ್ವಿತೀಯ ಹಾಗೂ 8 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿದ್ದಾರೆ.

ಅಭಿನಂದನೆ :
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಸ್ವಾಮಿರಾವ್, ಕಾಲೇಜ್ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಂ.ಪಿ. ಸುರೇಶ್ ವಿದ್ಯಾರ್ಥಿಗಳನ್ನು ಅಭಿನಂದಿಸುವುದರ ಜೊತೆಗೆ ಈ ಕಾಲೇಜಿನ ಉತ್ತಮ ಪರಿಶ್ರಮಕ್ಕಾಗಿ ದುಡಿದ ಎಲ್ಲ ಉಪನ್ಯಾಸಕರ ವೃಂದ ಹಾಗೂ ಶಾಲಾಭಿವೃದ್ಧಿಯವರಿಗೆ ಅಭಿನಂದಿಸಿದ್ದಾರೆ.