ಹೊಸನಗರ

ಹೊಸನಗರ : ಶಾಲೆ ಬಿಟ್ಟ ವಿದ್ಯಾರ್ಥಿನಿ ಮನೆಗೆ ಖುದ್ದು ಭೇಟಿ ನೀಡಿ ಮನವೊಲಿಸಿದ ನ್ಯಾಯಾಧೀಶರು

InShot 20260831 153230463

ಹೊಸನಗರ : ತಾಲ್ಲೂಕಿನಲ್ಲಿ ಸುಮಾರು 207 ವಿದ್ಯಾರ್ಥಿಗಳು ಶಾಲೆ ಬಿಟ್ಟಿದ್ದಾರೆ. ಅವರೆಲ್ಲರೂ ಪುನಃ ಶಾಲೆಗೆ ಕರೆ ತರುವ ಕಾರ್ಯಕ್ರಮ ನಡೆಯುತ್ತಿದ್ದು ಅದರಂತೆ ತಹಸೀಲ್ದಾರ್ ಭರತ್‌ರಾಜ್ ನೇತೃತ್ವದ ತಂಡ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್‌, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯಿತ್ರಿ ಕೆ.ಜಿ ಹಾಗೂ ಹೊಸನಗರದ ಎಲ್ಲ ಸರ್ಕಾರಿ ಅಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಪುನಃ ಕರೆ ತರುವ ಪ್ರಯತ್ನ ನಡೆಯುತ್ತಿದ್ದು ಅದರಂತೆ ಹೊಸನಗರ ತಾಲ್ಲೂಕು ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುಮ್ಮ ಗ್ರಾಮದ ವಿದ್ಯಾರ್ಥಿನಿಯನ್ನು ಹೊಸನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಮಾರುತಿ ಶಿಂಧೆ ಖುದ್ದು ಆಕೆಯ ಮನೆಗೆ ಭೇಟಿ ನೀಡಿ ಆಕೆಯನ್ನು ಹಾಗೂ ಅವರ ಕುಟುಂಬದವರನ್ನು ಮನವೊಲಿಸಿ ಶಾಲೆಗೆ ಪುನಃ ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯಿತ್ರಿ ಕೆ.ಜಿ, ಸರ್ಕಾರಿ ಅಭಿಯೋಜಕ ಅರುಣ್‌ಕುಮಾರ್, ವಕೀಲರ ಸಂಘದ ಅಧ್ಯಕ್ಷ ಚಂದ್ರಪ್ಪ, ಪ್ರೌಢಶಾಲಾ ಮುಖೋಪಾಧ್ಯಯ ಪರಶುರಾಮ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪರಮೇಶ್ವರ ಬಿ.ಬಿ, ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>