ಹೊಸನಗರ ; ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳ ಕುರಿತ ಮಾಹಿತಿಯನ್ನು ನೀಡಲು ICAR ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಇಲ್ಲಿನ ತಾಲೂಕು ಕೃಷಿಕ ಸಮಾಜ ಜಂಟಿ ಸಹಭಾಗಿತ್ವದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ-2025 ಶೀರ್ಷಿಕೆಯಡಿ ತಾಂತ್ರಿಕ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮವು ಈ ಕೆಳಗಿನ ವೇಳಾಪಟ್ಟಿಯಂತೆ ಇದೇ ಜೂನ್ 02 ಮತ್ತು 03ರಂದು ತಾಲೂಕಿನಲ್ಲಿ ಎಲ್ಲಾ ಹೋಬಳಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ಸಸ್ಯ ರೋಗ ಶಾಸ್ತ್ರ, ಕೀಟ ಶಾಸ್ತ್ರದ, ಬೇಸಾಯ ಶಾಸ್ತ್ರದ ಕೃಷಿ ವಿಜ್ಞಾನಿಗಳ ತಂಡ ಪಾಲ್ಗೊಂಡು ರೈತರಿಗೆ ಮಾಹಿತಿ ನೀಡಲಿದ್ದಾರೆ. ಕೃಷಿಗೆ ಸಂಬಂಧಿಸಿದ ಯಾವುದೇ ವಿಷಯಗಳ ಕುರಿತು ರೈತರು ಚರ್ಚೆ ಮಾಡಬಹುದಾಗಿದೆ.
ಈ ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲ ರೈತ ಬಾಂಧವರು ತಮ್ಮ ಹತ್ತಿರದ ಕಾರ್ಯಕ್ರಮ ನೆಡೆಯುವ ಸ್ಥಳಗಳಲ್ಲಿ ಪಾಲ್ಗೊಳ್ಳಬೇಕೆಂದು ಹಾಗೂ ತಮ್ಮ ವ್ಯಾಪ್ತಿಯ ಎಲ್ಲಾ ರೈತರಿಗೆ ಈ ಕಾರ್ಯಕ್ರಮ ಕುರಿತು ಸೂಕ್ತ ಮಾಹಿತಿ ನೀಡಬೇಕೆಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ಕೋರಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.