ಹೊಸನಗರ ; ಇಲ್ಲಿನ ಪಟ್ಟಣ ಪಂಚಾಯತಿಯ ಪೌರ ನೌಕರ ಸುನೀಲ್ (40) ಸೋಮವಾರ ಬೆಳಗ್ಗೆ ನಿಧನರಾದರು.
ಸುನೀಲ್ ಕಳೆದ ಕೆಲ ದಿನಗಳಿಂದ ಕರಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಇವರು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆ ಅವರನ್ನು ಭಾನುವಾರ ಹೊಸನಗರದಲ್ಲಿರುವ ಅವರ ಸ್ವಗೃಹಕ್ಕೆ ಕರೆ ತರಲಾಗಿತ್ತು.
ಮೃತರಿಗೆ ತಂದೆ ಕೃಷ್ಣಪ್ಪ ಹಾಗೂ ತಾಯಿ ಮುತ್ತಮ್ಮನವರು ಇದ್ದು ಇವರು ಸಹ ಪಟ್ಟಣ ಪಂಚಾಯತಿಯ ನಿವೃತ್ತ ಪೌರ ನೌಕರರಾಗಿದ್ದಾರೆ. ಇವರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.
ಸಂತಾಪ :
ಇವರ ನಿಧನಕ್ಕೆ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಹರೀಶ್ ಹಾಗೂ ಪಟ್ಟಣ ಪಂಚಾಯತಿಯ ಎಲ್ಲ ಸಿಬ್ಬಂದಿಗಳು, ಪಟ್ಟಣ ಪಂಚಾಯತಿ ಅಧ್ಯಕ್ಷ ನಾಗಪ್ಪ ಹಾಗೂ ಎಲ್ಲ ಸದಸ್ಯರುಗಳು ಹಾಗೂ ಪಟ್ಟಣ ಪಂಚಾಯಿತಿಯ ಗ್ರಾಮಸ್ಥರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.